Breaking News

ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್: 10ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರಿಗೆ ಗಾಯಗಳಾಗಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಗೀಜಿಹಳ್ಳಿ ಬಳಿ ನಡೆದಿದೆ.ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಡಿಕೇರಿಕಡೆ ಬಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಅರಸಿಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *