Breaking News

ಮಂಗಳೂರಲ್ಲೊಂದು ಭೀಕರ ರಸ್ತೆ ಅಪಘಾತ ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರು ಸಾವು

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ರಮ್ಯ(23), ರವಿ‌(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *