ದಕ್ಷಿಣಕನ್ನಡ : ಇಂದು ಬೆಳಿಗ್ಗೆ ತಾನೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಆಟೋರಿಕ್ಷ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಘಟ್ಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

