Breaking News

ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ

ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *