ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮಧ್ಯಾಹ್ನ ಸಂಭವಿಸಿದ ಹೃದಯವಿದ್ರಾವಕ ಘಟನೆಯೊಂದರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಕೇವಲ ಎರಡು ವರ್ಷದ ಬಾಲಕಿ ಲಕ್ಷ್ಮೀ ದುರ್ಮರಣಕ್ಕೀಡಾಗಿದ್ದಾಳೆ.ಪರಸಪ್ಪ ಎಂಬವರ ಪುತ್ರಿ ಲಕ್ಷ್ಮೀ ಮೃತ ಮಗು.ಸ್ಥಳೀಯರ ಪ್ರಕಾರ, KA 33 F 0346 ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್ ಕೂಡಲಗಿ ಗ್ರಾಮದಿಂದ ಸುರಪುರ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಗು ಅಂಗಳದ ಬಳಿ ಆಟವಾಡುತ್ತಾ ರಸ್ತೆಬದಿ ಬಂದ ಕ್ಷಣದಲ್ಲಿ ಅವಘಡ ಸಂಭವಿಸಿದೆ. ಬಸ್‌ನ ಎರಡು ಚಕ್ರಗಳು ಮಗುವಿನ ಮೇಲೆ ಹರಿದ ಪರಿಣಾಮ ದೇಹ ಛಿದ್ರಗೊಂಡಿದೆ. ಘಟನೆ ನಂತರ ಕುಟುಂಬಸ್ಥರ ಆಕ್ರಂದನ ಮನ ಕಲಕುವಂತಿತ್ತು. ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕರ ವಿರುದ್ಧ ಪ್ರಕರಣ ದಾಖಲು ಮಾಡುವ ಪ್ರಕ್ರಿಯೆ ಮುಂದುವರೆದಿದೆ. ಗ್ರಾಮಸ್ಥರು ರಸ್ತೆ ಸುರಕ್ಷತಾ ಕ್ರಮಗಳ ಕೊರತೆ ಹಾಗೂ ಬಸ್ ಚಾಲಕರ ಅಜಾಗರೂಕತೆಯ ಬಗ್ಗೆ ಕಿಡಿಕಾರಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

