Breaking News

ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ಆರೋಪಿ ಸೆರೆ

ಮಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆರೋಪಿಯು ಹಲ್ಲೆ ನಡೆಸಿ, ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *