Breaking News

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೈಸೂರು ವಿ.ವಿ ಉಪನ್ಯಾಸಕನ ವಿರುದ್ಧ ದೂರು ದಾಖಲು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ವಿ.ವಿಯ ಸ್ಕೂಲ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪನ್ಯಾಸಕ ಭರತ್ ವಿವಾಹಿತರಾಗಿದ್ದು, ಪಬ್‌ಗೆ ಬರುವಂತೆ ಒತ್ತಾಯಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಅಂಕ ಹೆಚ್ಚು ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಪೀಡಿಸಿದ್ದಾರೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಫೇಲ್ ವಾಡುತ್ತೇನೆ ಎಂದು ಬೆದರಿಸಿದ್ದಾರೆ. ಯುವತಿಯು ಮಹಿಳಾ ಉಪನ್ಯಾಸಕರ ಬಳಿ ಈ ವಿಷಯವನ್ನು ಹೇಳಿಕೊಂಡಿದ್ದಾರೆ. ನನಗೆ ಮಾನಸಿಕವಾಗಿ ತೊಂದರೆ ನೀಡುತ್ತಿರುವ ಉಪನ್ಯಾಸಕ ಭರತ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ, ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *