ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನಗಿರಿ-ಬೀರೂರು ಹೆದ್ದಾರಿಯ ಮಸಣಿಕೆರೆ ಕ್ರಾಸ್ ಬಳಿ ಸೋಮವಾರ (ನ.17) ಬೆಳಗ್ಗೆ ನಡೆದಿದೆ.ಮೃತರನ್ನು ಅಬಕಾರಿ ಇಲಾಖೆಯ ಸಿಬ್ಬಂದಿ ಉಮೇಶ್ (38) ಎಂದು ಗುರುತಿಸಲಾಗಿದೆ. ಅಪಘಾತಕ್ಕೊಳಗಾದವರು ಹಾಸನ ಜಿಲ್ಲೆಯ ಬೇಲೂರಿನ ಮೂಲದವರು ಆಗಿದ್ದು, ದಾವಣಗೆರೆಗೆ ವಿವಾಹ ಸಮಾರಂಭಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಲ್ಲಿಕಾರ್ಜುನ್(38), ಅವಿನಾಶ್(25), ಯಾಸಿನ್ ಖಾನ್(30) ಮತ್ತು ಮಹಾಂತೇಶ್ (36) ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಆಸ್ಪತ್ರೆಗೆ ಭೇಟಿ
ಶಿವಮೊಗ್ಗ ಶಾಸಕ ಚನ್ನಬಸಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

