ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಳಿಯಾರು ರಸ್ತೆಯ ಹುಯಿಲ್ ದೊರೆ ಸೇತುವೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾಗಿದೆ. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೋಧಿ ರಸ್ತೆ ತುಂಬ ಚೆಲ್ಲಿದೆ.ಅಪಘಾತದ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಚೀಲಗಳೊಂದಿಗೆ ಬಂದು ಲಾರಿಯಿಂದ ಬಿದ್ದ ಗೋಧಿಯನ್ನು ಬಾಚಿಕೊಂಡಿದ್ದಾರೆ. ಕೆಲವರಂತೂ ಗೋಧಿಯನ್ನು ಬಾಚಿ ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಈ ಘಟನೆ ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

