ಬೆಂಗಳೂರು: ಅಪ್ಪನ ಮೇಲೆ ಹಲ್ಲೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಪುತ್ರ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಗರದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾರಾಯಣಸ್ವಾಮಿ(55) ಕೊಲೆಯಾದವರು.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಜಯ್ ಎಂಬಾತನನ್ನು ಬಂಧಿಸಿದ್ದಾರೆ.ಅಜಯ್ ತಂದೆ ಮುನಿವೆಂಕಟಪ್ಪ ಮತ್ತು ನಾರಾಯಣಸ್ವಾಮಿ ಅವರು ಮದ್ಯದ ಅಮಲಿನಲ್ಲಿ ನ.11ರಂದು ಗಲಾಟೆ ಮಾಡಿಕೊಂಡಿದ್ದರು. ತಂದೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕೋಪಗೊಂಡಿದ್ದ ಅಜಯ್, ನಾರಾಯಣಸ್ವಾಮಿ ಅವರ ಮೇಲೆ ತೀವ್ರ ಹಲ್ಲೆ ಮಾಡಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭಾನುವಾರ ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

