Breaking News

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ ಪಾರಾದ 33 ಮಂದಿ

ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ. ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ. ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *