Breaking News

ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!

ಬೆಳಗಾವಿಯ ಆಜಾದ್ ನಗರದಲ್ಲಿ ಮೂವರು ಯುವಕರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 22 ವರ್ಷದ ಸರ್ಫರಾಜ್ ಹರಪ್ಪನಹಳ್ಳಿ, ರಿಹಾನ್ ಮತ್ತು ಮೋಹಿನ್ ನಲಬಂದ ಸಾವನ್ನಪ್ಪಿದ್ದಾರೆ. 19 ವರ್ಷದ ಶಹಾನವಾಜ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮನೆಯಲ್ಲಿ ಮಲಗಿದ್ದವರು ನಿಗೂಢವಾಗಿ ಮೃತಪಟ್ಟಿದ್ದು ಮಕ್ಕಳನ್ನು ಕಳಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೊಳ್ಳೆ ಬತ್ತಿ ಹೊಗೆ ಮತ್ತು ಚಳಿ ಕಾಯಿಸಲು ಹಾಕಿದ ಬೆಂಕಿ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಾಳಮಾರುತಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *