ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಅಜೆಕಾರಿನ ರತ್ನಾಕರ ಅಮೀನ್ (49) ಅವರನ್ನು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.ನ. 15ರಂದು ನಗರದ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣ ವೇದಿಕೆ ಉಡುಪಿ ತಾಲೂಕು ವತಿಯಿಂದ ಹೊಸದಿಲ್ಲಿ ಬಾಂಬ್ ಸ್ಫೋಟದ ಕುರಿತು ಇಸ್ಲಾಮಿಕ್ ಭಯೋತ್ಪಾದನೆ ಕೃತ್ಯವನ್ನು ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವರು ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ರೀತಿ ಭಾಷಣ ಮಾಡಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.ಈ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ನ. 18ರಂದು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ ನೇತೃತ್ವದ ವಿಶೇಷ ತಂಡವು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

