ಮಂಜೇಶ್ವರ: ಕಾರಿನ ಬೋನೆಟ್‌ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 10 ಲಕ್ಷ ರೂ.ಯನ್ನು ತಲಪಾಡಿಯಿಂದ ಮಂಜೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮಂಗಳೂರು ಭಾಗದಿಂದ ಬರುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ.ಪತ್ತೆಯಾಗಿದೆ.ಹಣವನ್ನು ವಶಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ನ.16 ರಂದು ಸಂಜೆ ತಲಪಾಡಿಯಲ್ಲಿ ಪೊಲೀಸರು ನಡೆಸಿದ ವಾಹನ ತಪಾಸಣೆಯಲ್ಲಿ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 13 ಲಕ್ಷ ರೂ. ಪತ್ತೆ ಹಚ್ಚಿ ವಶಪಡಿಸಲಾಗಿತ್ತು. ಸ್ಥಳೀಯಾಡಳಿತ ಚುನಾವಣೆಯ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

