Breaking News

ಅಗ್ನಿಶಾಮಕ ದಳದ ಚಾಲಕ ಆತ್ಮಹತ್ಯೆ

ಕೊಪ್ಪಳ: ಇಲ್ಲಿನ ಅಗ್ನಿಶಾಮಕ ದಳದಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮೂಲತಃ ಕಲಬುರಗಿಯ ದೇವಿನಗರದ ನಿವಾಸಿ ಶರಣಬಸವ (26) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಳಿಗ್ಗೆ ಕೊಠಡಿಯಿಂದ ಹೊರಬಂದು ಇತ್ತೀಚೆಗೆ ಖರೀದಿ ಮಾಡಿದ್ದ ತಮ್ಮ ರಾಯಲ್ ಎನ್‌ಫೀಲ್ಡ್ ಬೈಕ್ ಸ್ವಚ್ಛಗೊಳಿಸಿ ಹಾಗೂ ಸುತ್ತಲೂ ಓಡಾಡಿ ಮತ್ತೆ ಕೊಠಡಿಗೆ ವಾಪಸ್ ಹೋಗಿದ್ದರು. ಬಳಿಕ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಷಯ ತಿಳಿದು ಪೊಲೀಸರು ಕೊಠಡಿ ಪರಿಶೀಲಿಸಿ ಅವರ ಕುಟುಂಬದವರಿಗೆ ವಿಷಯ ಮುಟ್ಟಿಸಿದ್ದಾರೆ. ಕಲಬುರಗಿಯಿಂದ ಕುಟುಂಬದವರು ಬಂದ ಬಳಿಕವೇ ಅವರ ಸಮ್ಮುಖದಲ್ಲಿ ಮೃತದೇಹವನ್ನು ಕೆಳಗಡೆ ಇಳಿಸಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಯಿತು. ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೊಠಡಿಯಲ್ಲಿ ಮೊಬೈಲ್ ಪೋನ್ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *