Breaking News

ಗ್ಯಾಸ್‌ ಸಿಲಿಂಡರ್‌ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್‌ ನಂ.17ರಲ್ಲಿ ನಡೆದಿದೆ.ಇಂದು ಬೆಳಿಗ್ಗೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ ಮನೆಯಲ್ಲಿ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅರಕಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *