Breaking News

ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಲ್ಲಿ ದರೋಡೆ

ಬೆಂಗಳೂರು: ನಗರದ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಹಣ ದರೋಡೆಯಾಗಿದ್ದು, ₹ 7 ಕೋಟಿ ಹಣವಿತ್ತು ಎಂದು ಅಂದಾಜಿಸಲಾಗಿದೆ. ಜೆಪಿ ನಗರದ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಸಿಎಂಎಸ್ ವಾಹನದಲ್ಲಿ ಹಣ ತರುತ್ತಿದ್ದ ವೇಳೆ ಇನ್ನೊವಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು, ತೆರಿಗೆ ಇಲಾಖೆ ಅಧಿಕಾರಿಗಳು ಎಂದು ಬಿಂಬಿಸಿಕೊಂಡಿದ್ದು, ಹಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ.ಈ ವೇಳೆ ಹಣದ ಸಮೇತ ಸಿಬ್ಬಂದಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗಿರುವ ದರೋಡೆಕೋರರು, ಬಳಿಕ ಡೇರಿ ವೃತ್ತದಲ್ಲಿ ಸಿಎಂಎಸ್ ಸಿಬ್ಬಂದಿಯನ್ನು ಬಿಟ್ಟು ಹಣದೊಂದಿಗೆ ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *