Breaking News

ಕೇರಳ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅರಕಲಗೂಡು ಬಳಿ ಪಲ್ಟಿ: 15 ವಿದ್ಯಾರ್ಥಿಗಳಿಗೆ ಗಾಯ

ಕೇರಳದಿಂದ ಕರ್ನಾಟಕಕ್ಕೆ ಅಧ್ಯಯನ ಪ್ರವಾಸ ಬಂದ ವಿದ್ಯಾರ್ಥಿಗಳ ಬಸ್ಸೊಂದು ಹಾಸನದ ಬಳಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಹಾಸನದ ಅರಕಲಗೂಡು ತಾಲೂಕಿನ ಬರಗೂರು ಬಳಿ ಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನೂ ಕೂಡಲೇ ಅರಕಲಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ಹಾಗೂ ಪಿರಿಯಾಪಟ್ಟಣ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ವಿದ್ಯಾರ್ಥಿಗಳು ಬೆಂಗಳೂರಿಗೆ ಪ್ರವಾಸ ಹೋಗಿದ್ದು, ವಾಪಸ್ ಬರುತ್ತಿದ್ದ ವೇಳೆ ಹಾಸನದ ಅರಕಲಗೂಡಿನ ಸಮೀಪ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿಗಳು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ವಡಕಾರದ ಶಾಲೆಯೊಂದರಿಂದ ಮಕ್ಕಳು ಕರ್ನಾಟಕ ಪ್ರವಾಸಕ್ಕೆಂದು ಬಂದಿದ್ದರು. ನಿನ್ನೆ ರಾತ್ರಿ 11:30 ರ ಸುಮಾರಿಗೆ ಈ ಬಸ್ ಅಪಘಾತ ಸಂಭವಿಸಿತ್ತು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *