Breaking News

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ದರೋಡೆ ಪ್ರಕರಣ: ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಬಂಧನ

ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಹೇಗೆ ಮಾಡಬೇಕೆಂದು ಹೇಳಿಕೊಟ್ಟಿದ್ದರು. ದರೋಡೆ ನಂತರ ಹೇಗೆ ತಪ್ಪಿಸಿಕೊಳ್ಳಬೇಕೆಂದು ಕೂಡ ತರಬೇತಿ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂಪಾಯಿ ದರೋಡೆ ಮಾಡಿದೆ. ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಯಲ್ಲಿ ಭಾಗಿಯಾಗಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎಂಬ ವಿಷಯ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *