Breaking News

ಸಾಲದ ವಿಚಾರ.. ಸೊಸೆಯ ಜೀವವನ್ನೇ ತೆಗೆದ ಮಾವನ ಬಂಧನ!

ಹೊಂಗಸಂದ್ರದಲ್ಲಿ ನಡೆದಿದ್ದ ಗಾರ್ಮೆಂಟ್ಸ್ ನೌಕರೆ ಹತ್ಯೆ ಪ್ರಕರಣವನ್ನು ಬೊಮ್ಮನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಪ್ರಮೋದಾ ಕೊಲೆ ಪ್ರಕರಣ ಸಂಬಂಧ ಮೃತಳ ಮಾವನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮಂದಣ್ಣ ಎಂಬಾತನ ಬಂಧನವಾಗಿದ್ದು, ಮನೆಯಲ್ಲಿ ಪ್ರಮೋದಾಳ ಕುತ್ತಿಗೆ ಚಾಕುವಿನಿಂದ ಇರಿದು ಭಾನುವಾರ ರಾತ್ರಿ ಕೊಂದು ಆರೋಪಿ ಪರಾರಿಯಾಗಿದ್ದ.ಪ್ರಮೋದಾಳ ಕುತ್ತಿಗೆಗೆ ಅಡುಗೆ ಮನೆಯಿಂದ ಚಾಕು ತಂದು ಇರಿದು ಕೊಂದು ಮಂದಣ್ಣ ಪರಾರಿಯಾಗಿದ್ದ. ಸದ್ಯ ತನಿಖೆ ನಡೆಸಿ ಸೊಸೆ ಕೊಂದ ಮಂದಣ್ಣನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *