ರಾಜಧಾನಿ ಬೆಂಗಳೂರಿನ ಅತ್ಯಂತ ಪ್ರಮುಖ ಪ್ರದೇಶದಲ್ಲಿ ನಡೆದ 7.11 ಕೋಟಿ ರೂಪಾಯಿ ದರೋಡೆ ಕೇಸ್‌ನಲ್ಲಿ ಪೊಲೀಸರ ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ರಾಬರಿ ಪ್ರಕರಣದಲ್ಲಿ ತನಿಖೆ ತೀವ್ರಗೊಳಿಸುತ್ತಿದ್ಧಂತೆ ವಿವಿಧ ವಿಚಾರಗಳು ಬಹಿರಂಗವಾಗುತ್ತಿದೆ.ದರೋಡೆಕೋರರ ಜೊತೆ ಸೇರಿ 7.11 ಕೋಟಿ ರೂಪಾಯಿ ಹಣವನ್ನು ದೋಚಲು ಪ್ಲ್ಯಾನ್ ಮಾಡಲಾಗಿತ್ತೇ ಎನ್ನುವ ಅನುಮಾನ ಬಂದಿದೆ. ಅಣ್ಣಪ್ಪ ನಾಯಕ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕ್ರೈಮ್ ಪಿಸಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

