Breaking News

ರಾಜ್ಯದಲ್ಲಿ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ಹಾವೇರಿಯಲ್ಲಿ ವಿಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣು

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ ಪತಿ ಎಂದು ತಿಳಿದುಬಂದಿದೆ. ಪತ್ನಿ, ಅತ್ತೆ-ಮಾವ ಮತ್ತು ಅವರ ಮಾವ ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಕಿರುಕುಳಕ್ಕೆ ಬೇಸತ್ತು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಮಂಜುನಾಥ್ ವೀಡಿಯೋ ಮಾಡಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ. ನನ್ನ ಹೆಂಡತಿ, ಅವರ ತಂದೆ-ತಾಯಿ, ಅವರ ಮಾವ ಭೀರಪ್ಪ, ಹೊನ್ನಸಿದ್ದಪ್ಪ ಹಾಗೂ ರಾಜಪ್ಪ ಮಾನಸಿಕವಾಗಿ ತುಂಬಾ ಹಿಂಸೆ ಕೊಟ್ಟಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕಣ್ಣೀರು ಹಾಕಿದ್ದಾರೆ. ಘಟನೆ ಸಂಬಂಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *