Breaking News

ಜೆಡಿಎಸ್‌ ಮುಖಂಡನ ಕೊಲೆ ಯತ್ನ ಕೇಸ್‌: ಕಾಂಗ್ರೆಸ್ ನಾಯಕಿ ಸೆರೆ.

ಜೆಡಿಎಸ್‌ ಮುಖಂಡ ಟಿ.ಅಸ್ಗರ್‌ ಕೊಲೆ ಯತ್ನ ಪ್ರಕರಣದ ಆರೋಪಿಗೆ ನೆರವು ನೀಡಿದ ಆರೋಪದಡಿ ಕಾಂಗ್ರೆಸ್‌ ನಾಯಕಿ ಸವಿತಾಬಾಯಿ ಮಲ್ಲೇಶ್‌ ನಾಯ್ಕ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದಾಗ ಆತನಿಗೆ ಸವಿತಾಬಾಯಿ ಹಣಕಾಸು ಹಾಗೂ ಆಶ್ರಯ ನೀಡಿ ಸಹಾಯ ಮಾಡಿದ್ದು ಬಯಲಿಗೆ ಬಂದಿತ್ತು. ಸವಿತಾಬಾಯಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಟಿಕೆಟ್‌ ಸಿಗದೆ ಇದ್ದಾಗ ಪಕ್ಷೇತರರಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಮರಳಿ ಕಾಂಗ್ರೆಸ್‌ ಸೇರಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *