ಚಿತ್ರದುರ್ಗದ ಗಾಂಧಿ ಸರ್ಕಲ್ ನಲ್ಲಿ ರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಆಟೋ ತಡೆದು ಕಿರುಕುಳ ನೀಡಿ ಲಂಚ ಕೇಳಿದ್ದಕ್ಕೆ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ತೀವ್ರ ಸುಟ್ಟ ಗಾಯಗಳಾಗಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿದು ಆಟೋ ಚಾಲನೆ, ಸಮವಸ್ತ್ರ ಇಲ್ಲದಿರುವುದು, ನಿಯಮ ಉಲ್ಲಂಘನೆ ಬಗ್ಗೆ ಸಂಚಾರ ಪೊಲೀಸರು ಪ್ರಶ್ನಿಸಿದ್ದರು. ಈ ಬಗ್ಗೆ ಆಕ್ಷೇಪಿಸಿದ್ದ ತಿಪ್ಪೇಸ್ವಾಮಿ ವಿಡಿಯೋ ಮಾಡಿದ್ದರು. ಇದು ವಿಕೋಪಕ್ಕೆ ತಿರುಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

