Breaking News

ಪೊಲೀಸ್‌ ಸಿಬ್ಬಂದಿಯಿಂದಲೇ ಕಿಡ್ನಾಪ್‌ – ಪ್ರಕರಣ ಬೇಧಿಸಿದ ಪೊಲೀಸ್‌!

ಖಾಸಗಿ ಕಂಪನಿಯ ನಾಲ್ವರು ನೌಕರರನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಮಂಗಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಡ್ ಕಾನ್ಸೆಬಲ್ ಸೇರಿ 8 ಆರೋಪಿಗಳನ್ನು ಬಂಧಿಸಿದ್ದಾರೆ.ಕೋಲಾರ ಜಿಲ್ಲೆ ಮಾಲೂರು ಗ್ರಾಮಾಂತರ ಠಾಣೆಯ ಹೆಡ್‌ ಕಾಸ್ಟೇಬಲ್‌ ಚಲಪತಿ ಸೇರಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಎರಡು ಕಾರ್ ಗಳನ್ನು ಜಪ್ತಿ ಮಾಡಲಾಗಿದೆ. ತನಿಖೆಯ ವೇಳೆ ಆರೋಪಿಗಳಿಂದ ಅಪಹರಣಕ್ಕೊಳಗಾಗಿದ್ದ ನೌಕರರ ಖಾತೆಯಿಂದ 18.9 ಲಕ್ಷ ರೂಪಾಯಿ ಹಣವನ್ನು ತಮ್ಮ ಸಂಬಂಧಿಕರೊಬ್ಬರ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುವುದು ಕಂಡುಬಂದಿದ್ದು, ಆ ಹಣವನ್ನು ಸದ್ಯ ಫ್ರೀಜ್ ಮಾಡಲಾಗಿದೆ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರೋ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *