ಅಂಗವಿಕಲ ವ್ಯಕ್ತಿಯೋರ್ವನಿಗೆ ಆತನ ಸಂಬಂಧಿಕರೇ ಕ್ರೂರವಾಗಿ ಹಲ್ಲೆ ನಡೆಸಿದ ಹಾಗೂ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.ಭತ್ತ ಮಾರಾಟ ಮಾಡಿ ಮದ್ಯ ಸೇವಿಸಿದ ಬಳಿಕ ಸಂತ್ರಸ್ತ ಹಾಗೂ ಆರೋಪಿಗಳು ಮನೆಗೆ ಹಿಂದಿರುಗುತ್ತಿದ್ದಾಗ ಅವರ ನಡುವೆ ಜಗಳ ಆರಂಭವಾಯಿತು. ಅದು ಹಲ್ಲೆಗೆ ಕಾರಣವಾಯಿತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ಸಂತ್ರಸ್ತನ ಮೇಲೆ ಹತ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಮತ್ತೋರ್ವ ಸಂತ್ರಸ್ತನನ್ನು ಹಿಡಿದು ಎಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಶೀಲಾ ಸುರಾನಾ ಆರೋಪಿಗಳ ಬಂಧನವನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೀಡಿಯೊ ವೈರಲ್ ಆದ ಬಳಿಕ ಪೊಲೀಸರು ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

