Breaking News

ಪೋಷಕರು ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆ!

ನಾಗಪುರ – ಮೊಬೈಲ್ ಫೋನ್ ಬಳಸಲು ನಿರಾಕರಿಸಿದ್ದರಿಂದ ಕು. ದಿವ್ಯಾ ಕೊಠಾರೆ (ವಯಸ್ಸು ೧೩) ಎಂಬ ವಿದ್ಯಾರ್ಥಿನಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಣಕಾಪುರದಲ್ಲಿರುವ ಜಯ ಭೋಲೆ ನಗರ ಪ್ರದೇಶದಲ್ಲಿ ನಡೆದಿದೆ. ಕು.ದಿವ್ಯಾ ೮ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳು ನಿಯಮಿತವಾಗಿ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮಗಳನ್ನು ಅತಿಯಾಗಿ ಬಳಸುತ್ತಿದ್ದ ಕಾರಣ ಪಾಠಗಳನ್ನು ನಿರ್ಲಕ್ಷಿಸುತ್ತಿದ್ದಳು. ಈ ಕಾರಣದಿಂದಾಗಿ ಆಕೆಯ ಕುಟುಂಬದವರು ‘ಮೊಬೈಲ್ ಬಳಕೆ ಕಡಿಮೆ ಮಾಡಿ ಅಧ್ಯಯನಕ್ಕೆ ಹೆಚ್ಚು ಗಮನ ನೀಡು’ ಎಂದು ನಿರಂತರವಾಗಿ ತಿಳಿಸಿ ಹೇಳುತ್ತಿದ್ದರು. ನವೆಂಬರ್ ೨೧ರಂದು, ಆಕೆಯ ಕುಟುಂಬದವರು ಅವಳಿಗೆ ಮೊಬೈಲ್ ಬಳಸಲು ಅವಕಾಶ ನೀಡದ ಕಾರಣ, ಅವಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಳು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *