Breaking News

ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ಓರ್ವ ವಶಕ್ಕೆ

ಅಖಿಲೇಶ್ ಎಡಪದವಿನಿಂದ ಮಂಗಳೂರು ಕಡೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ಚೂರಿಗಳನ್ನು ಕೊಂಡುಹೋಗುತ್ತಿರುವುದನ್ನು ಗಮನಿಸಿ, ತನ್ನ ಮೊಬೈಲ್‌ನಲ್ಲಿ ಅವರ ವೀಡಿಯೊ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಅದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಅಖಿಲೇಶ್‌ರ ಮೇಲೆ ಚೂರಿ ಝಳಪಿಸಿದೆ. ಈ ವೇಳೆ ಅವರ ಕೈಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಕೂಡಲೇ ಎಚ್ಚೆತ್ತುಕೊಂಡ ಸಾರ್ವಜನಿಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಮೂವರು ದ್ವಿಚಕ್ರ ವಾಹನದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಕೃತ್ಯ ಎಸಗಿದ ಎಲ್ಲಾ ಆರೋಪಿಗಳ ಗುರುತು ಪತ್ತೆಹಚ್ಚಲಾಗಿದ್ದು, ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಘಟನೆ ನಡೆಯುವ ಮುನ್ನ ನಾಲ್ವರು ಆರೋಪಿಗಳು ಬಾರ್‌ನಿಂದ ಹೊರಬರುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಆರೋಪಿಗಳು ಮದ್ಯದ ಪ್ರಭಾವದಲ್ಲಿದ್ದಾರೆಯೇ ಅಥವಾ ಯಾವುದೇ ಇತರ ಮಾದಕ ದ್ರವ್ಯದ ಪ್ರಭಾವದಲ್ಲಿದ್ದರೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *