Breaking News

ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್‌) ಡೀನ್‌ ವಿರುಪಾಕ್ಷಪ್ಪ ಅವರ ಪಿಎ ಲಕ್ಷ್ಮೀಪತಿ ಸಿ.ಕೆ. ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಾಲ್ಕು ತಂಡಗಳ ಅಧಿಕಾರಿಗಳು ಏಕಕಾಲಕ್ಕೆ ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.ಶಿವಮೊಗ್ಗ ನಗರದ ಜೆ.ಹೆಚ್. ಪಟೇಲ್ ಬಡಾವಣೆಯ ಮನೆ, ಮೆಡಿಕಲ್ ಕಾಲೇಜು ಕ್ವಾಟರ್ಸ್ ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿರುವ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *