Breaking News

ಬೆಳಗಾವಿಯಲ್ಲಿ ಘೋರ ಘಟನೆ : ಹೆಣ್ಣು ಮಗು ಹುಟ್ಟಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

ತಾಯಿಯೊಬ್ಬಳು ಕತ್ತು ಹಿಸುಕಿ ತನ್ನ ಮಗುವನ್ನೇ ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ರಾಮದುರ್ಗದ ಹಿರೇಮುಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಹಳಕಟ್ಟಿ (28) ಎಂಬ ಮಹಿಳೆ ಈ ಕೃತ್ಯ ಎಸಗಿದ್ದಾಳೆ.ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಅಶ್ವಿನಿ ನಾಲ್ಕನೆ ಮಗು ಹೆಣ್ಣಾಗಿದ್ದಕ್ಕೆ ಸಿಟ್ಟಿಗೆದ್ದು ಮಗುವಿನ ಕತ್ತು ಹಿಸುಕಿ ಕೊಂದಿದ್ದಾಳೆ.ಈ ಮೊದಲು ಅಶ್ವಿನಿಗೆ ಮೂರು ಹೆಣ್ಣು ಮಕ್ಕಳಿದ್ದವು. ನಾಲ್ಕನೆಯದು ಗಂಡು ಆಗುತ್ತದೆ ಎಂದು ಅಶ್ವಿನಿ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ನಾಲ್ಕನೆ ಬಾರಿ ಹೆಣ್ಣು ಹುಟ್ಟಿದ್ದು, ಇದರಿಂದ ಬೇಸತ್ತ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *