ಕಲಬುರಗಿ – ಕರಾಳ ರಸ್ತೆ ಅಪಘಾತದಲ್ಲಿ ಕರ್ನಾಟಕದ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಪುರದಿಂದ ಕಲಬುರಗಿಗೆ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ KA 04 NC 7982 ಸಂಖ್ಯೆಯ ಇನ್ನೋವಾ ಕಾರು ಗೌನಳ್ಳಿ ಕ್ರಾಸ್ ಬಳಿ ಪಲ್ಟಿ ಹೊಡೆದಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ಉರುಳಿ ಬಿದ್ದಿದೆ ಎಂದು ಪ್ರಾಥಮಿಕ ಮಾಹಿತಿ. ಕಾರಿನಲ್ಲಿ ಒಟ್ಟೂ 5 ಮಂದಿ ಇದ್ದು,

IAS ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ,
ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬೀಳಗಿ –
1974ರ ಮಾರ್ಚ್ 27ರಂದು ಜನಿಸಿದ್ದ ಅವರು
2012 ಬ್ಯಾಚ್ IAS ಅಧಿಕಾರಿ.
ದಾವಣಗೆರೆ, ಉಡುಪಿ ಸೇರಿದಂತೆ ಹಲವೆಡೆ ಸೇವೆ ಸಲ್ಲಿಸಿದ್ದರು. ಹಿಂದೆ ಬೆಸ್ಕಾಂ ಎಂಡಿ, ಇತ್ತೀಚೆಗೆ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ದಾರುಣ ಘಟನೆಯನ್ನು ಕೇಳಿ ರಾಜ್ಯದ ಆಡಳಿತ ವಲಯದಲ್ಲಿ ದುಃಖದ ವಾತಾವರಣ ಕಾಣಿಸಿಕೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

