ವರ್ಕ್ ಪೂರ್ಣಗೊಳಿಸದ ಕಾರಣಕ್ಕೆ ಶಾಲೆಯ ಶಿಕ್ಷಕರೇ 5 ವರ್ಷದ ಬಾಲಕನನ್ನು ಹಗ್ಗದಿಂದ ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಅಮಾನವೀಯ ಘಟನೆ ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ಶಿಸ್ತು” ಕಲಿಸುವ ನೆಪದಲ್ಲಿ ಶಿಕ್ಷಕರು ಮಗುವನ್ನು ಹಗ್ಗದಿಂದ ಕಟ್ಟಿ ಶಾಲಾ ಆವರಣದಲ್ಲಿದ್ದ ಮರಕ್ಕೆ ಹಲವು ಗಂಟೆಗಳ ಕಾಲ ನೇತು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳೀಯರೊಬ್ಬರು ಈ ದೃಶ್ಯವನ್ನು ವಿಡಿಯೋ ಮಾಡಿ ಹರಿಬಿಟ್ಟ ನಂತರ ಈ ಕ್ರೂರ ವರ್ತನೆ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

