Breaking News

ವರದಕ್ಷಿಣೆ ಕಿರುಕುಳ.. ಗೃಹಿಣಿ ಅನುಮಾನಾಸ್ಪದ ಸಾವು..!

ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿದ್ದಾನೆ ಎಂದು ರೇಖಾ ಪೋಷಕರು ಆರೋಪಿಸಿದ್ದಾರೆ. ಪ್ರೀತಿಸಿ ಮದುವೆಯಾದ ಜೋಡಿ ಸುಖಸಂಸಾರ ನಡೆಸುತ್ತಿದ್ದರು.ಆದ್ರೆ ಮಾಯಪ್ಪ ನಿರಂತರವಾಗಿ ಹಣ ನೀಡುವಂತೆ ಪೀಡಿಸುತ್ತಿದ್ದನು. ಗಂಡ ಹಾಗೂ ಹೆಂಡ್ತಿ ಮಧ್ಯೆ ಆಗಾಗ ಜಗಳ ಕೂಡ ನಡೆಯುತ್ತಿತ್ತು ಎನ್ನಲಾಗಿದೆ.

ಕಳೆದ ಆರು ವರ್ಷದ ಹಿಂದೆ ಇಬ್ಬರು ವಿವಾಹವಾಗಿದ್ದರು. ಮಾಯಪ್ಪ ಬೆಂಗಳೂರಿಗೆ ಬಂದು ಬಿಬಿಎಂಪಿ ಮಾರ್ಷಲ್ ಆಗಿ ಕೆಲಸ ಮಾಡಿಕೊಂಡಿದ್ದನು. ಬಾಡಿಗೆ ಮನೆ ಪಡೆದು 4 ವರ್ಷದ ಮಗಳು ಹಾಗೂ 2 ವರ್ಷದ ಮಗನ ಜೊತೆಗೆ ವಾಸವಿದ್ದರು. ಆದ್ರೆ ಕುಡಿತದ ಚಟಕ್ಕೆ ಬಿದ್ದ ಆಸಾಮಿಯು ರೇಖಾಳಿಗೆ ಹಿಂಸೆ ಕೊಡಲು ಪ್ರಾರಂಭಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *