Breaking News

ಕೊಪ್ಪಳ: ಹಾಸ್ಟೆಲ್‌ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ; 7 ಮಂದಿ ವಿರುದ್ಧ ಪೋಕ್ಸೊ ದಾಖಲು!

ಬೆಳಗಿನ ಜಾವ 6 ಗಂಟೆಗೆ ಹೊಟ್ಟೆ ನೋವು ಎಂದು ಶೌಚಾಲಯಕ್ಕೆ ತೆರಳಿದ್ದ ವೇಳೆ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ತಾಯಿ ಹಾಗೂ ಮಗುವಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿದೆ.ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಕಳೆದ ಎರಡು ತಿಂಗಳ ಹಿಂದೆ ಹಾಸ್ಟೆಲ್‌ನಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಸಂದರ್ಭದಲ್ಲೂ ಸಹ ಬಾಲಕಿ ಎಂಬ ವಿಚಾರ ಬೆಳಕಿಗೆ ಬಾರದೇ ಇರುವುದು ಅಚ್ಚರಿ ಮೂಡಿಸಿದೆ.

ಇನ್ನು ಬಾಲಕಿಯ ಸ್ವಗ್ರಾಮದ 23 ವರ್ಷದ ಯುವಕ ಆಕೆಯ ಜತೆ ಪ್ರೀತಿಯ ನಾಟಕವನ್ನಾಡಿ ಅತ್ಯಾಚಾರ ಎಸಗಿದ್ದು, ಆತನ ವಿರುದ್ಧ ಇದೀಗ ಪೋಕ್ಸೊ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *