ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಹತ್ಯೆಗೈದಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುತ್ಯಾಲನಗರ ನಿವಾಸಿ ನರಸಿಂಹರಾಜು (35) ಕೊಲೆಯಾದವ.ನರಸಿಂಹ ರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ಸಾರ್ವ ಜನಿಕವಾಗಿ ರಸ್ತೆಯಲ್ಲೇ ಐದಾರು ಮಂದಿ ಮನಸೋ ಇಚ್ಚೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಅಸ್ವಸ್ಥನಾಗಿದ್ದ ನರಸಿಂಹರಾಜುನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ. ಈ ಸಂಬಂಧ ಮೃತನ ತಾಯಿ, ಪುತ್ರನ ಸಾವಿಗೆ ಆತನ ಸ್ನೇಹಿತೆ ಮತ್ತು ಆಕೆಯ ಕುಟುಂಬ ಸದಸ್ಯರೇ ಕಾರಣ ಎಂದು ಆರೋಪಿಸಿ ದೂರು ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

