Breaking News

ಪಡಿತರ ಅಕ್ಕಿ ಅಕ್ರಮ ಸಂಗ್ರಹ: ಪ್ರಕರಣ ದಾಖಲು

ಮುಳಗುಂದ: ಇಲ್ಲಿನ ಬಜಾರನಲ್ಲಿರುವ ಧಾನ್ಯಗಳ ವ್ಯಾಪರಸ್ಥ ಸುನೀಲ ಬಸಪ್ಪ ಲಾಳಿ ಎಂಬುವರ ಅಂಗಡಿ ಮೇಲೆ ಮಂಗಳವಾರ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ₹20,362 ಮೌಲ್ಯದ 9 ಕ್ವಿಂಟಲ್ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಆಧರಿಸಿ ಗದಗ ಜಿಲ್ಲಾ ಆಹಾರ ಇಲಾಖೆ ಉಪನಿರ್ದೇಶಕ ಎಂ.ಎಸ್. ರಮೇಶ ಹಾಗೂ ತಂಡದವರು ದಾಳಿ ನಡೆಸಿದ್ದಾರೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗದಗ ತಾಲ್ಲೂಕು ಆಹಾರ ಇಲಾಖೆ ನಿರೀಕ್ಷಕ ಎಂ.ಎಸ್. ಹಿರೇಮಠ ಹಾಗೂ ಪೊಲೀಸ್ ಸಿಬ್ಬಂದಿ ಗಂಗಾಧರ ಕರಲಿಂಗಣ್ಣನವರ, ಗ್ರಾಮ ಲೆಕ್ಕಾಧಿಕಾರಿ ಪ್ರಿಯಾಂಕಾ ನರಗುಂದ ಇದ್ದರು.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *