Breaking News

ಸೆಂಟ್ರಿಂಗ್ ಸಾಮಾನು ಇಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಚಿಂಚೋಳಿ (ಕಲಬುರಗಿ ಜಿಲ್ಲೆ): ಕಟ್ಟಡ ಛತ್ತು ಹಾಕಲು ತಂದಿದ್ದ ಸೆಂಟ್ರಿಂಗ್ ಸಾಮಾನು ಇಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ತಾಲ್ಲೂಕಿನ ಕೊಟಗಾ ಗ್ರಾಮದಲ್ಲಿ ಸಂಭವಿಸಿದೆ.ರಟಕಲ್ ಗ್ರಾಮದ ಸಂಗಮೇಶ ಬಿರಾದಾರ (38) ಮೃತರು.ರಟಕಲ್ ಗ್ರಾಮದಿಂದ ಸೆಂಟ್ರಿಂಗ್ ಸಾಮಾನುಗಳು ಕೊಟಗಾ ಗ್ರಾಮಕ್ಕೆ ಒಯ್ದಿದ್ದು, ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಸಮೀಪದಲ್ಲಿ ಮನೆ ನಿರ್ಮಿಸುತ್ತಿದ್ದ ವ್ಯಕ್ತಿಯೊಬ್ಬರ ಕಟ್ಟಡಕ್ಕೆ ಛತ್ತು ಹಾಕಲು ತೆರಳಿದ್ದರು. ಛತ್ತಿನ ಸಾಮಾನು ಇಳಿಸುವಾಗ ಮೇಲಿನಿಂದ ಹಾದು ಹೋಗಿದ್ದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಪ್ರವಹಿಸಿ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಳಗಿ ತಾಲ್ಲೂಕಿನ ರಟಕಲ್ ಠಾಣೆಯ ಸಬ್ ಇನಸ್ಪೆಕ್ಟರ್ ಶೀಲಾದೇವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *