Breaking News

ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಹಾಜರು

ಬೆಳ್ತಂಗಡಿ: ಉಜಿರೆಗೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ಬೆಳಾಲು ಕಡಂಬಿಲದ ಸವಿತಾ (26) ಅವರು ಮದುವೆಯಾಗಿ ಗುರುವಾರ ಪತಿಯ ಸಮೇತ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ತಾನು ನೆರಿಯದ ಗಂಡಿಬಾಗಿಲಿನ ನೆಡಿಂಜಾರು ನಿವಾಸಿ ಚಂದ್ರಕಾಂತ್ (26) ಅವರೊಂದಿಗೆ ಸುಳ್ಯದಲ್ಲಿ ನೋಂದಣಿ ಮಾಡಿಕೊಂಡು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿರುವುದಾಗಿ ತಿಳಿಸಿದ್ದಾರೆ.ಸವಿತಾ ನ. 24ರಂದು ಉಜಿರೆಗೆ ಕೆಲಸಕ್ಕೆ ಹೋದವರು ನಾಪತ್ತೆಯಾಗಿರುವ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಅವರ ಹೇಳಿಕೆಯನ್ನು ಪಡೆದುಕೊಂಡು ಕಳುಹಿಸಿಕೊಟ್ಟಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *