Breaking News

ಪಡುಬಿದ್ರಿ: ಕಾರು ಢಿಕ್ಕಿಯಾಗಿ ಮಹಿಳೆಗೆ ಗಂಭೀರ ಗಾಯ

ರಸ್ತೆ ದಾಟಲು ನಿಂತಿದ್ದ ಪಡುಬಿದ್ರಿ ನಡಾಲು ಗ್ರಾಮದ ಲಲಿತಾ ಶೆಟ್ಟಿ ಅವರು ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಕಾರನ್ನು ಚಾಲಕ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿಕೊಂಡು ಬಂದಿದ್ದು, ಅದು ಲಲಿತಾಗೆ ಢಿಕ್ಕಿ ಹೊಡೆಯಿತು.ರಸ್ತೆಗೆ ಬಿದ್ದ ಅವರ ಬಲಕೈ, ಎರಡೂ ಕಾಲುಗಳು ಹಾಗೂ ತಲೆಗೆ ಗಾಯ ವಾಯಿತು. ಪಡುಬಿದ್ರಿ ಸಿದ್ಧಿವಿನಾಯಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯನ್ನಾಗಿ ದಾಖಲು ಮಾಡಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *