ಬೋಳಂತೂರು – ವೀರಕಂಬ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡ ಬಂದ ಕಾರಣ ಅಪಘಾತ ಸಂಭವಿಸಿ ಸವಾರ ಬೋಳಂತೂರು ಗ್ರಾಮದ ಉಮೇಶ ಅವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ವೀರಕಂಬದಲ್ಲಿ ಅಪಘಾತ ಸಂಭವಿಸಿದೆ. ಅವರನ್ನು ಕೂಡಲೇ ಶರತ್ ಎಂಬವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಹರೀಶ ನಾಯ್ಕ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

