ಕಬ್ಬಿಣ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಹಿಂಡಸ್ಕಟ್ಟೆ ಗ್ರಾಮದ ಬಳಿ ಘಟನೆ ನಡೆದಿದೆ.ಮೃತರನ್ನು ತಿಪಟೂರು ಮೂಲದ ಚಂದನ್ ಗೌಡ(22 ವರ್ಷ) ಕುಮಾರ(17 ವರ್ಷ) ಎಂದು ಗುರುತಿಸಲಾಗಿದೆ.ಕೋಳಿ ಸಾಗಿಸುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಕಬ್ಬಿಣದ ಲಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಬ್ಬಿಣದ ಸರಳುಗಳು ಲಾರಿಯ ಒಳಗೆ ನುಗ್ಗಿದ ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ PSI ಮಹೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

