ಗಂಗೊಳ್ಳಿ: ಆಲೂರು ಗ್ರಾಮದ ಸಂತೋಷ (48) ಅವರು ಆಲೂರು ಗ್ರಾಮದ ದೊಳಬೆ ಎಂಬಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಮನೆಗೆ ನಡೆದುಕೊಂಡು ಹೋಗುವಾಗ ಆವರಣ ಇಲ್ಲದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಅವರ ಸಹೋದರ ರಾಜು ಕುಲಾಲ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

