ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಖಕ್ಕೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ವೀಡಿಯೋದಲ್ಲಿ ಕಂಡು ಬಂದಿದೆ. ಇದನ್ನು ಗ್ರಾ.ಪಂ. ಕಚೇರಿಯಲ್ಲಿದ್ದವರು ವೀಡಿಯೋ ಮಾಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗಳ ಅಮಾನವೀಯ ಕೃತ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ತಾಯಿ-ಮಗಳ ಹೊಡೆದಾಟದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿಲ್ಲ. ವೀಡಿಯೋ ಮಾಡಿ ಅದಕ್ಕೆ ಹೆಚ್ಚು ವೀಕ್ಷಣೆ ಬರುವ ಉದ್ದೇಶದಿಂದ ವೈರಲ್ ಮಾಡಿದ ವ್ಯಕ್ತಿಯ ಬಗ್ಗೆ ಯಾರಾದರೂ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

