Breaking News

ಸ್ಲೀಪರ್‌ ಬಸ್ಸಿಗೆ ಅಪರಿಚಿತ ವಾಹನ ಢಿಕ್ಕಿ; ಭೀಕರ ಅಪಘಾತಕ್ಕೆ ಚಾಲಕರಿಬ್ಬರು ಮೃತ್ಯು

ದೆಹಲಿಯಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್‌ಗೆ ವೇಗವಾಗಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಬಸ್ಸಿನಲ್ಲಿದ್ದ ಇಬ್ಬರು ಚಾಲಕರು ಪ್ರಾಣ ಕಳೆದುಕೊಂಡಿದ್ದು, ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಕೋಟಾ ನ್ಯೂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದೆ. ಬಸ್ಸಿನಲ್ಲಿ ಒಟ್ಟು 42 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಕೈತೂನ್ ಪೊಲೀಸ್ ಠಾಣಾ ವ್ಯಾಪ್ತಿಯ ಆರಂಖೇಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಪಘಾತದ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *