Breaking News

ಬೆಂಗಳೂರು: ಶೇಷಾದ್ರಿಪುರಂನಲ್ಲಿ ಕಟ್ಟಡ ಕಾರ್ಮಿಕ ಮಹಿಳೆಯ ಭೀಕರ ಕೊಲೆ!

ಶೇಷಾದ್ರಿಪುರಂನಲ್ಲಿ ಚಾಕುವಿನಿಂದ ಇರಿದು ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಶೇಷಾದ್ರಿಪುರಂನ 1ನೇ ಮುಖ್ಯರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಮೃತರನ್ನು ಬಿಜಾಪುರ ಮೂಲದ ಶರಣಮ್ಮ (23) ಎಂದು ಗುರುತಿಸಲಾಗಿದೆ.ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರನನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಕಾರ್ಯಾಚರಣೆ ಆರಂಭಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *