ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ ದುರಂತ ಸಂಭವಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಸುಳೆ ಮುರ್ಕಿ ಬಳಿ ನಡೆದಿದೆ. ಒಬ್ಬ ವಿದ್ಯಾರ್ಥಿ ದುರ್ಮರಣ ಹೊಂದಿದ್ದು, 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ.ಮೃತ ಬಾಲಕನನ್ನು ಮೈಸೂರಿನ ಪವನ್ (ವಯಸ್ಸು 15) ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಗೋಕರ್ಣ ಪ್ರವಾಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ, ಸುಳೆ ಮುರ್ಕಿ ಕ್ರಾಸ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದ್ದು, ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

