Breaking News

ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಪಡುಬಿದ್ರಿ ನಡ್ಡಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ (22) ಮೃತಪಟ್ಟವರು. ಮಂಗಳೂರು ಕಡೆ ಹೋಗುವ ಸರ್ವಿಸ್ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಬಂದ ಗೂಡ್ಸ್ ಟೆಂಪೊ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಗಾಯವಾಗಿತ್ತು.ಸಾರ್ವಜನಿಕರು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದರು. ವಾಮಂಜೂರಿನ ಕರಾವಳಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ, ಪ್ರೇಕ್ಷಾ ಪರೀಕ್ಷೆ ಮುಗಿಸಿ ಮನೆಯತ್ತ ಹೊರಟಿದ್ದರು. ತೀರಾ ಬಡ ಕುಟುಂಬದ ಆಕೆ ತಂದೆಯನ್ನು ಕಳೆದುಕೊಂಡಿದ್ದರು. ಅವರಿಗೆ ತಾಯಿ, ಸಹೋದರ ಇದ್ದಾರೆ.ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *