ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಉರ್ದು ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಲು ಕಾಗಿನೆಲೆಯಿಂದ ಬರುತ್ತಿದ್ದ ಟಂಟಂ ವಾಹನ ಅಂಗರಗಟ್ಟಿ ಗ್ರಾಮದ ಬಳಿ ಪಲ್ಟಿಯಾಗಿ ಮೂವರು ಮಕ್ಕಳು ತೀವ್ರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.12ಕ್ಕೂ ಹೆಚ್ಚು ಮಕ್ಕಳನ್ನು ಟಂಟಂ ವಾಹನದ ಮೂಲಕ ಅಪಾಯಕಾರಿ ರೀತಿಯಲ್ಲಿ ಕರೆತರಲಾಗುತ್ತಿತ್ತು. ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಟಂಟಂ ಚಾಲಕ ರಸ್ತೆ ಬದಿ ತೆಗೆದುಕೊಂಡಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ತಕ್ಷಣ ಮಕ್ಕಳನ್ನು ಇನ್ನೊಂದು ವಾಹನದ ಮೂಲಕ ಬ್ಯಾಡಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಪ್ರಕರಣ ದಾಖಲಾಗಿಲ್ಲ. ಅಧಿಕಾರಿಗಳ ಹಾಗೂ ಶಿಕ್ಷಕರ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

