Breaking News

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 61 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಭದ್ರಾವತಿ ನಗರದ ಸಿಪಿಐ ಶ್ರೀಧರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆಯ ವೇಳೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *