Breaking News

ಗಾಜು ತುಂಬಿದ ಲಾರಿ ಪಲ್ಟಿ; ಟ್ರಾಫಿಕ್ ಸಮಸ್ಯೆ

ರಾಯಚೂರು: ತಾಲೂಕಿನ ಕಲ್ಮಲಾ ಸಮೀಪ ಗಾಜು ತುಂಬಿದ ಲಾರಿ ಪಲ್ಟಿಯಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಸೋಮವಾರ (ಡಿ.01) ಬೆಳಗ್ಗೆ ಬೈಕ್ ಸವಾರ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿದೆ. ಬೈಕ್ ಸವಾರರನ್ನು ತಪ್ಪಿಸಲು ಹೋಗಿ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆಇದರಿಂದ ರಸ್ತೆಯ ಮಧ್ಯೆ ಅಡ್ಡಲಾಗಿ ಲಾರಿ ಬಿದ್ದಿರುವುದು ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಸ್ಥಳಕ್ಕೆ ತೆರಳಿದ ರಾಯಚೂರು ಗ್ರಾಮೀಣ ಪೊಲೀಸರು ಕ್ರೇನ್ ಮೂಲಕ ಲಾರಿ ತೆರವುಗೊಳಿಸುತ್ತಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *